Sunday, July 14, 2024
Homeಪುತ್ತೂರುಶಿರಾಡಿ ಘಾಟಿಯಲ್ಲಿ ಕೆಎಸ್ಸಾರ್ಟಿಸಿ ಬಸ್ಸುಗಳು, ಲಾರಿ ನಡುವೆ ಸರಣಿ ಅಪಘಾತ

ಶಿರಾಡಿ ಘಾಟಿಯಲ್ಲಿ ಕೆಎಸ್ಸಾರ್ಟಿಸಿ ಬಸ್ಸುಗಳು, ಲಾರಿ ನಡುವೆ ಸರಣಿ ಅಪಘಾತ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಗುಂಡ್ಯ ಬಳಿ ಶಿರಾಡಿ ಘಾಟಿ ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದೆ. ಐರಾವತ, ರಾಜಹಂಸ, ಲಾರಿ ನಡುವೆ ಸರಣಿ ಅಪಘಾತವಾಗಿ ಚಾಲಕರುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ಸನ್ನು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಹಿಂದಿಕ್ಕುವಾಗ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರಾಜಹಂಸ ಬಸ್ಸು ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ಲಾರಿ ಹಳ್ಳಕ್ಕೆ ಬಿದ್ದಿದ್ದು, ರಾಜಹಂಸ ಮತ್ತು ಐರಾವತ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಐರಾವತ ಬಸ್ಸು ಚಾಲಕ ಕಿರಣ್‌ ಮೇಸ್ತ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು.

RELATED ARTICLES
- Advertisment -
Google search engine

Most Popular