ತಲಪಾಡಿಯಲ್ಲಿ ಲಾರಿ–ಬಸ್–ಕಾರು ನಡುವೆ ಸರಣಿ ಅಪಘಾತ : ಬಸ್ ಚಾಲಕನಿಗೆ ಗಾಯ

0
29

ಬಂಟ್ವಾಳ : ತಾಲೂಕಿನ ತಲಪಾಡಿಯಲ್ಲಿ ಸೋಮವಾರ ಲಾರಿ, ಬಸ್ ಹಾಗೂ ಕಾರು ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬಸ್ ಚಾಲಕ ಗಾಯಗೊಂಡಿದ್ದಾರೆ.

ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಬಂದ ಲಾರಿ ಮಂಗಳೂರು ಕಡೆಗೆ ತಿರುಗುತ್ತಿದ್ದ ವೇಳೆ, ಮಂಗಳೂರಿನಿಂದ ಬಿ.ಸಿ.ರೋಡು ಕಡೆಗೆ ತೆರಳುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ.

ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬಸ್ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ. ಈ ವೇಳೆ ಬಸ್‌ನ ಹಿಂಬದಿಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಗಂಭೀರ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯಿಂದ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು ಎಂದು ತಿಳಿದುಬಂದಿದೆ.