ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ವಿದ್ಯಾರ್ಥಿನಿಯನ್ನು ಲೈಂಗಿಕ ಚಟುವಟಿಕೆಗೆ ಬಳಸಿಕೊಂಡು ಗರ್ಭಪಾತ ಮಾಡಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಕೃತ್ಯ ಎಸಗಿದ ಶಿಕ್ಷಕ ಮತ್ತು ಗರ್ಭಪಾತ ಮಾಡಿದ ಚಳ್ಳಕೆರೆಯ ನರ್ಸಿಂಗ್ ಆಸ್ಪತ್ರೆ ವೈದ್ಯರ ವಿರುದ್ಧ ತಳಕು ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎನ್. ರೇಖಾ ದೂರು ದಾಖಲಿಸಿದ್ದಾರೆ.
ಕಳೆದ ಮೂರು ತಿಂಗಳಿನಿಂದ ವಿದ್ಯಾರ್ಥಿನಿಯನ್ನು ಶಿಕ್ಷಕ ಲೈಂಗಿಕ ಚಟುವಟಿಕೆ ಬಳಸಿಕೊಂಡಿದ್ದು, ಆಕೆ ಗರ್ಭಿಣಿಯಾಗಿದ್ದರಿಂದ ಗರ್ಭಪಾತ ಮಾಡಿಸಿದ್ದಾನೆ. ಯಾರಿಗಾದರೂ ವಿಷಯ ತಿಳಿಸಿದರೆ ತೊಂದರೆ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದಾನೆ.
ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಿಂದ ಮಾಹಿತಿ ಬಂದ ಕೂಡಲೇ ಆತನನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಅಮಾನತು ಮಾಡಿದ್ದಾರೆ.

