ನಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ಧಿ, ಜ್ಞಾನ, ಕೌಶಲ್ಯ, ಆರ್ಥಿಕ ಸೌಲಭ್ಯ ಇತ್ಯಾದಿಗಳನ್ನು ಸಮಾಜದ, ದೇಶದ ಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಅರ್ಪಣಾಮನೋಭಾವದಿಂದ ನೀಡುವ ಸಹಾಯವೇ ಸೇವೆ. ಸೇವಾ ಚಟುವಟಿಕೆ ನಮ್ಮ ಜೀವನದ ಅವಿಭಾಜ್ಯ ಭಾಗ ಹಾಗೂ ಸ್ವಭಾವವಾಗಬೇಕೆಂದು ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.
ಅವರು ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಭಾಂಗಣದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿಯ ನೂತನ ಅಧ್ಯಕ್ಷರಾದ ಅಕ್ಷತಾ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಭಟ್ ದೇಂದಡ್ಕ ರವರಿಗೆ ಅಧಿಕಾರ ಹಸ್ತಾಂತರ ಮಾಡಿಸಿ ಪದಗ್ರಹಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಅಧ್ಯಕ್ಷತೆ ವಹಿಸಿದರು.
ಈ ಸಂದರ್ಭದಲ್ಲಿ ಪುನರೂರು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಜನ ವಿಕಾಸ ಸಮಿತಿ ಮೂಲ್ಕಿಯ ಉಪಾಧ್ಯಕ್ಷರಾದ ಆನಂದ ಮೇಲಾಂಟ, ಕಾರ್ಯದರ್ಶಿ ದಾಮೋದರ ಶೆಟ್ಟಿ, ಕೊಡೆತ್ತೂರು, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಪಿ. ಎಸ್. ಸುರೇಶ್ ರಾವ್, ಶಶಿಕರ ಕೆರೆಕಾಡು, ಶೋಭಾ ರಾವ್, ಜೀವನ್ ಶೆಟ್ಟಿ, ಗೀತಾ ಶೆಟ್ಟಿ ಉಪಸ್ಥಿತರಿದ್ದರು.
ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ ಕಾರ್ಯಕ್ರಮ ನಿರೂಪಿಸಿದರು.