ಸೇವಾ ಸಂಕಲ್ಪ ಅಭಿಯಾನ.ಬಿಜೆಪಿ ಹಿಂದುಳಿದ ಮೋರ್ಚಾ ಕಾಪು ವತಿಯಿಂದ ವಿವಿಧ ಕಾರ್ಯಕ್ರಮ ಯಶಸ್ವಿ

0
1

ಕಾಪು : ಪ್ರಧಾನಿ ಶ್ರೀ ನರೇಂದ್ರ ಮೋದಿ ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ ಸಲುವಾಗಿ ಬಿಜೆಪಿ ಹಿಂದುಳಿದ ಮೋರ್ಚಾ ಕಾಪು ವತಿಯಿಂದ ವಿವಿಧ ಕಾರ್ಯಕ್ರಮದ ಅಂಗವಾಗಿ ಉದ್ಯಾವರದ ವೃದ್ದಾಶ್ರಮ ಭೇಟಿ, ಕಾಪು ಬಿಜೆಪಿ ಕಚೇರಿಯಲ್ಕಿ ನೇತ್ರದಾನ ನೋಂದಾವಣೆ ಶಿಬಿರ ನಡೆಯಿತು.

ಕಾರ್ಯಕ್ರಮದಲ್ಲಿ ಕಾಪು ಶಾಸಕರು ಗುರ್ಮೆ ಸುರೇಶ್ ಶೆಟ್ಟಿ, ಕ್ಷೇತ್ರ ಬಿಜೆಪಿ ಅಧ್ಯಕ್ಷರು ಜಿತೇಂದ್ರ ಶೆಟ್ಟಿ ಉದ್ಯಾವರ, ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷರು ಸಂತೋಷ್ ಕುಮಾರ್ ಮೂಡುಬೆಳ್ಳೆ, ಪ್ರಧಾನ ಕಾರ್ಯದರ್ಶಿ ರವಿ ಸಾಲಿಯಾನ್ ಉದ್ಯಾವರ ಹಾಗೂ ಹಿಂದುಳಿದ ಮೋರ್ಚಾದ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.