ಕೊಕ್ಕಡ: ಬೆಳ್ತಂಗಡಿಯ ಕೊಕ್ಕಡ ಹೋಬಳಿಯ ಶಿಬಾಜೆ ಪರಿಸರದಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಏಳು ವಿದ್ಯುತ್ ಕಂಬಗಳು ಕುಸಿದುಬಿದ್ದಿವೆ. ಶಿಬಾಜೆಯ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ದೇವಸ್ಥಾನದ ಬಳಿ ಸುರಿದ ಭಾರೀ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕುಸಿದು ಬಿದ್ದ ಕಂಬಗಳನ್ನು ತೆರವುಗೊಳಿಸಿ, ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.