ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹವಾಮಾನದಲ್ಲಿ ಭಾರೀ ಏರುಪೇರು!

0
139

ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಿಶ್ರ ಹವಾಮಾನ ಕಂಡುಬರುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಇನ್ನೂ ಕೆಲವು ಭಾಗಗಳಲ್ಲಿ ತೀವ್ರ ಬಿಸಿಲು ಹಾಗೂ ಉಕ್ಕಿನ ವಾತಾವರಣ ಜನರನ್ನು ಕಂಗೆಡಿಸಲಿದೆ.

ಮೈಸೂರು, ಚಾಮರಾಜನಗರ, ಬೆಂಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಇಂದು ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಘಟ್ಟದ ತಪ್ಪಲಿನ ಪ್ರದೇಶಗಳು ಮತ್ತು ಕರಾವಳಿ ಭಾಗಗಳಲ್ಲಿಯೂ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದೆ.

ಇನ್ನೊಂದೆಡೆ ಉಡುಪಿ ಮತ್ತು ಮಂಗಳೂರು ಭಾಗಗಳಲ್ಲಿ ಹೆಚ್ಚಿನ ಹ್ಯುಮಿಡಿಟಿ ಕಂಡುಬರುವ ಸಾಧ್ಯತೆ ಇದ್ದು, ಸೆಕೆಯ ವಾತಾವರಣ ಜನರನ್ನು ಕಾಡಲಿದೆ. ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದ್ದು, ತೀವ್ರ ಬಿಸಿಲಿನ ಎಚ್ಚರಿಕೆ ನೀಡಲಾಗಿದೆ.

ಹವಾಮಾನದಲ್ಲಿ ಆಗುತ್ತಿರುವ ಈ ತೀವ್ರ ಏರುಪೇರುಗಳಿಂದ ಜನರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

LEAVE A REPLY

Please enter your comment!
Please enter your name here