Monday, February 10, 2025
Homeರಾಷ್ಟ್ರೀಯ61ರ ವಿಕಲಚೇತನ ಮಹಿಳೆಗೆ ಲೈಂಗಿಕ ಕಿರುಕುಳ | ಮೂವರು ಅಪ್ರಾಪ್ತರು ಸೇರಿ ನಾಲ್ವರ ಬಂಧನ

61ರ ವಿಕಲಚೇತನ ಮಹಿಳೆಗೆ ಲೈಂಗಿಕ ಕಿರುಕುಳ | ಮೂವರು ಅಪ್ರಾಪ್ತರು ಸೇರಿ ನಾಲ್ವರ ಬಂಧನ

ಗ್ಯಾಂಗ್ಟಕ್:‌ 61 ವರ್ಷದ ವಿಕಲಚೇತನ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಒಬ್ಬ ವಯಸ್ಕ ಮತ್ತು ಮೂವರು ಅಪ್ರಾಪ್ತ ವಯಸ್ಕರನ್ನು ಬಂಧಿಸಲಾಗಿದೆ ಎಂದು ಸಿಕ್ಕಿಂ ಪೊಲೀಸರು ತಿಳಿಸಿದ್ದಾರೆ. ಆ. 26ರಂದು ಜೋರೆಥಾಂಗ್‌ ಟೌನ್‌ ಬಸ್‌ ಪಾರ್ಕಿಂಗ್‌ ಕಾಂಪ್ಲೆಕ್ಸ್‌ನಲ್ಲಿ ಈ ಘಟನೆ ನಡೆದಿದೆ. ಆರೋಪಿಗಳು ಕೃತ್ಯದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್‌ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆಯ ಕುಟುಂಬಸ್ಥರು ನೀಡಿದ ದೂರಿನಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular