ಚಿಕ್ಕಬಳ್ಳಾಪುರ : ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ಆರೋಪಿ ಗಣೇಶ್ ಎಂಬಾತನನ್ನು ಬಂಧಿಸಿರುವ ಪೊಲೀಸರು, ಅಪ್ರಾಪ್ತ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿ ವಿರುದ್ಧ ಪೋಕೋ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಬಾಗೇಪಲ್ಲಿಯ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂತ್ರಸ್ತೆ, ಬಾಗೇಪಲ್ಲಿಯಿಂದ ವಾಪಸ್ಸು ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮಕ್ಕೆ ತೆರಳಲು ಪೆರೇಸಂದ್ರ ಕ್ರಾಸ್ ಬಳಿಯ ಬಸ್‌ನಿಲ್ದಾಣದಲ್ಲಿ ನಿಂತಿದ್ದಾಗ ಬೈಕ್ ಸವಾರ ಗಣೇಶ್ ಡ್ರಾಪ್ ಕೊಡುವ ನೆಪದಲ್ಲಿ ಆಕೆಯನ್ನು ಕರದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.ಆರೋಪಿ ಗಣೇಶ್‌ನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಗಣೇಶನಿಗೆ ಮದುವೆಯಾಗಿ ಮಕ್ಕಳಿದ್ದಾರೆ ಎನ್ನುವ ವಿಷಯ ತನಿಖೆ ವೇಳೆ ಗೊತ್ತಾಗಿದೆ.

