ತಿರುವನಂತಪುರ: ಖ್ಯಾತ ತೆಲುಗು ನಟ ಬಾಲಕೃಷ್ಣ ಜೊತೆ ನಾಯಕನಟಿಯಾಗಿ ಅಭಿನಯಿಸಿದ್ದ ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕೇರಳದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳದ ಖ್ಯಾತ ಉದ್ಯಮಿ ಬಾಬಿ ಚೆಮ್ಮನೂರ್ ಬಂಧಿತ ಆರೋಪಿ. ನಟ ನಂದಮೂರಿ ಬಾಲಕೃಷ್ಣ ನಟನೆಯ ಬ್ಲಾಕ್ ಬಸ್ಟರ್ ಚಿತ್ರ ವೀರ ಸಿಂಹಾ ರೆಡ್ಡಿ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ಮಲಯಾಳಂ ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟಿ ನೀಡಿದ್ದ ದೂರಿನ ಆಧಾರದ ಮೇಲೆ ದಾಖಲಾಗಿದ್ದ ಜಾಮೀನು ರಹಿತ ಪ್ರಕರಣಗಳ ಹಿನ್ನಲೆಯಲ್ಲಿ ವಯನಾಡಿನಲ್ಲಿ ಉದ್ಯಮಿ ಬಾಬಿ ಚೆಮ್ಮನೂರ್‌ರನ್ನು ಬಂಧಿಸಿದೆ.