Friday, May 23, 2025
Homeಅಪರಾಧಬಾಲಕನಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಬಾಲಕನಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಉಪ್ಪಿನಂಗಡಿ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಮಕ್ಕಳ ಸಹಾಯವಾಣಿಯ ಮೂಲಕ ಸಲ್ಲಿಸಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ದೋರ್ಮೆ ಎಂಬಲ್ಲಿನ ಅಬ್ದುಲ್ಲಾ ಬಂಧಿತ ಆರೋಪಿ. ಎರಡು ಮಕ್ಕಳ ತಂದೆಯಾಗಿರುವ ಬಂಧಿತ ಆರೋಪಿ 13 ವರ್ಷದ ಬಾಲಕನನ್ನು ಸ್ಕೂಟಿ ಕಲಿಸಿಕೊಡುತ್ತೇನೆಂದು ವಿವಿಧ ದಿನಗಳಲ್ಲಿ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕ ಶಾಲೆಯಲ್ಲಿ ನೀಡಿದ ಮಾಹಿತಿಯಂತೆ ಮಕ್ಕಳ ಸಹಾಯವಾಣಿ ಮೂಲಕ ದೂರು ದಾಖಲಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.   

RELATED ARTICLES
- Advertisment -
Google search engine

Most Popular