ಅಸಹಜ, ಅಸಹ್ಯ ಲೈಂಗಿಕ ಕಿರುಕುಳ: ಯುವಕನಿಂದ ಆರೋಪ!
ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ರ ಹಿರಿಯ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿರುವಾಗಲೇ ಅವರ ಸಹೋದರ ಡಾ. ಸೂರಜ್ ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಹಾಸನ ಅರಕಲಗೂಡು ತಾಲೂಕಿನ ವ್ಯಕ್ತಿಯೊಬ್ಬರು ಆಪಾದಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಖಾಸಗಿ ವಾಹಿನಿಯೊಂದರಲ್ಲಿ ವ್ಯಕ್ತಿಯೊಬ್ಬರು ಈ ಬಗ್ಗೆ ಆಪಾದಿಸಿದ್ದಾರೆ. ಈ ಬಗ್ಗೆ ಸಿಎಂ, ಡಿಸಿಎಂ, ಡಿಜಿಪಿಗೂ ದೂರು ಸಲ್ಲಿಸಿರುವುದಾಗಿ ಆದರೆ ಹೇಳಿದ್ದಾರೆ. ಆದರೆ ಈ ಬಗ್ಗೆ ದೂರು ಬಂದಿಲ್ಲ ಎಂದು ಡಿಜಿಪಿ ಕಚೇರಿ ತಿಳಿಸಿರುವುದಾಗಿ ವರದಿಯಾಗಿದೆ.
ಸೂರಜ್ ರೇವಣ್ಣ ತನ್ನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದರು. ತನ್ನೊಂದಿಗೆ ಸಹಕರಿಸಬೇಕು ಎಂದು ಆಗ್ರಹಿಸಿದ್ದರು ಎಂದು ಆ ವ್ಯಕ್ತಿ ಆಪಾದಿಸಿದ್ದಾರೆ. ಪ್ರಕಣದ ಸತ್ಯಾಸತ್ಯತೆ ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಈಗಾಗಲೇ ಜೈಲು ಸೇರಿದ್ದು, ಈ ನಡುವೆ ಅವರ ಸಹೋದರನ ಮೇಲೂ ಇಂತಹ ಆರೋಪ ಕೇಳಿಬಂದಿರುವುದು ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ರಾಜ್ಯದ ಪ್ರತಿಷ್ಠಿತ ರಾಜಕೀಯ ಕುಟುಂಬವೊಂದರ ಸದಸ್ಯರು ಇಂತಹ ಅಸಹಜ, ಅಸಹ್ಯ ಆರೋಪಗಳಿಗೆ ಗುರಿಯಾಗುತ್ತಿರುವ ಬಗ್ಗೆ ಚರ್ಚೆಗಳಾಗುತ್ತಿವೆ.