ಶಾಮಲಾದೇವಿ ಮೋಹನ್ ರವರು “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ

0
11

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ 71ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಾವಣಗೆರೆ ಜಿಲ್ಲೆಯ ಹರಿಹರದ ಶಾಮಲಾದೇವಿ ಮೋಹನ್ ರವರಿಗೆ “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷ್ಮ ಣ್ ರಾಯ್ಕರ್ ತಿಳಿಸಿದ್ದಾರೆ.

ಶೈಕ್ಷಣಿಕ, ಸಾಹಿತ್ಯ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶಾಮಲಾದೇವಿ ಮೋಹನ್ ರವರನ್ನು ಗುರುತಿಸಿ ಈ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ. ಕಲಾಕುಂಚದ ಸರ್ವ ಸದಸ್ಯರು, ಪದಾಧಿಕಾರಿಗಳು ಇವರಿಗೆ ಅಭಿಮಾನದಿಂದ ಅಭಿನಂದಿಸಿ ಕಲಾಕುಂಚದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here