Thursday, December 5, 2024
Homeಬಂಟ್ವಾಳಶಂಭೂರು: 19ರಂದು "ಮಕ್ಕಳ ಸಾಹಿತ್ಯ ಸಮ್ಮೇಳನ"

ಶಂಭೂರು: 19ರಂದು “ಮಕ್ಕಳ ಸಾಹಿತ್ಯ ಸಮ್ಮೇಳನ”

ಬಂಟ್ವಾಳ: ಇಲ್ಲಿನ ಮಕ್ಕಳ ಕಲಾ ಲೋಕ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತಾಲ್ಲೂಕು ಮಟ್ಟದ 18ನೇ ‘ಮಕ್ಕಳ ಸಾಹಿತ್ಯ ಸಮ್ಮೇಳನ’ವು ಇದೇ 19ರಂದು ಶಂಭೂರು ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಮಕ್ಕಳ ಕಲಾಲೋಕ ಅಧ್ಯಕ್ಷ ರಮೇಶ ಎಂ.ಬಾಯಾರು ಹೇಳಿದ್ದಾರೆ. ಬಿ.ಸಿ.ರೋಡಿನಲ್ಲಿ ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಅಂದು ಬೆಳಿಗ್ಗೆ ಶೇಡಿಗುರಿ ಎಂಬಲ್ಲಿ ಹೊರಡುವ ಆಕರ್ಷಕ ಮೆರವಣಿಗೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್ ಚಾಲನೆ ನೀಡುವರು ಎಂದರು.’ ಇಲ್ಲಿನ ಏಳನೇ ತರಗತಿ ವಿದ್ಯಾಥರ್ಿನಿ ಪ್ರೇಕ್ಷಾ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, 17ನೇ ಸಮ್ಮೇಳನಾಧ್ಯಕ್ಷೆ ಕಡೇಶಿವಾಲಯ ಸಕರ್ಾರಿ ಪ್ರೌಢಶಾಲೆ ವಿದ್ಯಾಥರ್ಿನಿ ಸಾನ್ವಿ ಸುವರ್ಣ ಸಮ್ಮೇಳನ ಉದ್ಘಾಟಿಸುವರು. ಇದೇ ವೇಳೆ ಮಕ್ಕಳ ಸ್ವರಚಿತ ಕೃತಿಗಳನ್ನು ಸಾಹಿತಿ, ನಿವೃತ್ತ ಮುಖ್ಯಶಿಕ್ಷಕ ರಾಮಕೃಷ್ಣ ಭಟ್ ಚೂಂತಾರು ಬಿಡುಗಡೆಗೊಳಿಸುವರು.

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾಥರ್ಿನಿ ವಿಭಾ ಕೆ.ಆರ್., ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವಕೀಲ ಶ್ರೀಧರ ಶೆಟ್ಟಿ ಪುಳಿಂಚ, ರಾಧಾಕೃಷ್ಣ ಪುತ್ತೂರು ಮತ್ತಿತರರು ಭಾಗವಹಿಸುವರು ಎಂದು ಸಮ್ಮೇಳನ ಸಮಿತಿ ಗೌರವಾಧ್ಯಕ್ಷ ಆನಂದ ಎ. ಶಂಭೂರು ತಿಳಿಸಿದರು. ಸುಮಾರು 500ಕ್ಕೂ ಮಿಕ್ಕಿ ವಿದ್ಯಾಥರ್ಿಗಳು ಸೇರಿದಂತೆ ಒಟ್ಟು 1500ಕ್ಕೂ ಮಿಕ್ಕಿ ಮಂದಿ ಗ್ರಾಮಸ್ಥರು ಮತ್ತು ಸಾಹಿತ್ಯಾಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ಸ್ವಾಗತ ಸಮಿತಿ ಅಧ್ಯಕ್ಷ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ಉಪಾಧ್ಯಕ್ಷ ರಾಜೇಶ್ ಶಾಂತಿಲ ಮತ್ತು ಹೆನ್ರಿ ಬುಕೆಲ್ಲೋ, ಪ್ರಧಾನ ಕಾರ್ಯದಶರ್ಿ ಮುಖ್ಯಶಿಕ್ಷಕ ಜಯರಾಮ ಪಡ್ರೆ ಸಮ್ಮೇಳನದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ ಎಂದು ಸ್ವಾಗತ ಸಮಿತಿ ಕಾರ್ಯಧ್ಯಕ್ಷ ಹೇಮಚಂದ್ರ ಭಂಡಾರದಮನೆ ಹೇಳಿದರು. ಅಂದು ಮಧ್ಯಾಹ್ನ ಬಳಿಕ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆ 9ನೇ ತರಗತಿ ವಿದ್ಯಾಥರ್ಿನಿ ಹನ್ಸಿಕಾ ಎಸ್.ಡಿ. ಪೂಜಾರಿ ಸಮಾರೋಪ ಬಾಷಣ ಮಾಡುವರು. ನಿವೃತ್ತ ಮುಖ್ಯಶಿಕ್ಷಕಿ ನೀಲಮ್ಮ, ನೆಟ್ಲ ಮೂಡ್ನೂರು ಗ್ರಾಮ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ಸಚ್ಚಿದಾನಂದ ಮತ್ತಿತರರು ಭಾಗವಹಿಸುವರು. ಇದೇ ವೇಳೆ ಸಾಹಿತ್ಯ ತಾರೆ ಪ್ರಶಸ್ತಿ, ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆ ಸಹಾಯಕ ಶಿಕ್ಷಕಿ ಸುಧಾ ನಾಗೇಶ್ ಇವರಿಗೆ ಬಾಲಬಂಧು ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಅವರು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖ್ಯಶಿಕ್ಷಕ ಜಯರಾಮ ಪಡ್ರೆ, ಪ್ರಚಾರ ಸಮಿತಿ ಸಂಚಾಲಕ ಚಿನ್ನಾ ಕಲ್ಲಡ್ಕ ಮತ್ತಿತರರು ಇದ್ದರು.

RELATED ARTICLES
- Advertisment -
Google search engine

Most Popular