ಗ್ಲಾಸ್ಗೋ : 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದ್ದು, ಪ್ಯಾರಾ ಅಥ್ಲಿಟ್ ಶರ್ಮಿಳಾ ಧಂಕರ್ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಮಂಗಳವಾರ ನಡೆದ ಮಹಿಳೆಯರ ಶಾಟ್‌ಪುಟ್ F57 ವಿಭಾಗದ ಸ್ಪರ್ಧೆಯಲ್ಲಿ 40 ವರ್ಷದ ಶರ್ಮಿಳಾ ಧಂಕರ್ ಚಿನ್ನದ ಪದಕ ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಈ ಮೂಲಕ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪರ ಚಿನ್ನದ ಪದಕ ಗೆದ್ದ ಮೊದಲ ಪ್ಯಾರಾ ಅಥ್ಲಿಟ್ ಎಂಬ ಐತಿಹಾಸಿಕ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದಾರೆ.
ಶರ್ಮಿಳಾ ಅವರ ಈ ಸಾಧನೆಯೊಂದಿಗೆ ಭಾರತದ ಪದಕಗಳ ಸಂಖ್ಯೆಯೂ ಹೆಚ್ಚಳಗೊಂಡಿದೆ. ಭಾರತ ಇದುವರೆಗೆ 2 ಚಿನ್ನ, 5 ಬೆಳ್ಳಿ ಹಾಗೂ 3 ಕಂಚಿನ ಪದಕಗಳು ಸೇರಿದಂತೆ ಒಟ್ಟು 10 ಪದಕಗಳನ್ನು ತನ್ನದಾಗಿಸಿಕೊಂಡಿದೆ.
ಶರ್ಮಿಳಾ ಧಂಕರ್ ಅವರ ಸಾಧನೆಗೆ ದೇಶದಾದ್ಯಂತ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದ್ದು, ಭಾರತದ ಪ್ಯಾರಾ ಕ್ರೀಡಾ ಕ್ಷೇತ್ರಕ್ಕೆ ಈ ಗೆಲುವು ಮತ್ತಷ್ಟು ಉತ್ತೇಜನ ನೀಡಿದೆ.

