ಮುಲ್ಕಿ: ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಗ್ರಾಮೀಣ ಭಾಗದಲ್ಲಿ ಹಿಂದಿನ ಕಾಲದ ಗ್ರಾಮೀಣ ಕ್ರೀಡೆಗಳು ಕಣ್ಮರೆಯಾಗುತ್ತಿದ್ದು ಯುವ ಜನಾಂಗಕ್ಕೆ ಶಿಕ್ಷಣದ ಜೊತೆಗೆ ಗ್ರಾಮೀಣ ಕ್ರೀಡೆಗಳ ಮಾಹಿತಿ ನೀಡಿ ಪ್ರೋತ್ಸಾಹಿಸಬೇಕಾಗಿದೆ ಎಂದು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ಪದ್ಮಿನಿ ವಿಜಯ್ ಕುಮಾರ್ ಶೆಟ್ಟಿ ಹೇಳಿದರು
ಅವರು ಪಂಜಿನಡ್ಕ ಫ್ರೆಂಡ್ಸ್ ವತಿಯಿಂದ ಶಿಮಂತೂರು ಶ್ರೀ ಜನಾರ್ಧನ ದೇವಸ್ಥಾನದ ಹೊರಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಗ್ರಾಮೀಣ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಕಿಲ್ಪಾಡಿ ಗ್ರಾಪಂ ಸದಸ್ಯೆ ಮಮತಾ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಶಾಂತರಾಮ ಶೆಟ್ಟಿ ತೆಂಗಾಳಿ, ಮಾಜೀ ಸದಸ್ಯರಾದ ದಿನೇಶ್ಚಂದ್ರ ಅಜಿಲ,ಹರೀಶ್ ಶೆಟ್ಟಿ , ಪ್ರತಿಮಾ ರಾವ್, ಉದ್ಯಮಿ ರಾಮದಾಸ್ ಶೆಟ್ಟಿ, ಪಂಜಿನಡ್ಕ ಫ್ರೆಂಡ್ಸ್ ನ ಅಧ್ಯಕ್ಷ ಕಿಶೋರ್ ಶೆಟ್ಟಿ ತೆಂಗಾಳಿ, ಶಿಮಂತೂರು ಯುವಕ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಯುವಕ ಮಂಡಲದ ಪ್ರವೀಣ್ ಧನ್ಯವಾದ ಅರ್ಪಿಸಿದರು ಗೋಪಾಲ್ ಶಿಮಂತೂರು ನಿರೂಪಿಸಿದರು

