ಮಂಗಳೂರು: ಬೆಂಗಳೂರು-ಮಂಗಳೂರು ರಸ್ತೆಯ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೊಡ್ಡತಪ್ಪಲು ಬಳಿ ಭೂ ಕುಸಿತವಾಗಿರುವುದರಿಂದ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅನಿರ್ಧಿಷ್ಠಾವಧಿ ನಿರ್ಬಂಧ ಹೇರಲಾಗಿದೆ. ಜು. 18ರಂದು ದೊಡ್ಡ ತಪ್ಪಲು ಬಳಿ ಗುಡ್ಡ ಕುಸಿತ ಉಂಟಾಗಿ ಹೆದ್ದಾರಿ ಸಂಚಾರಕ್ಕೆ ಅಡಚಣೆಯಾಗಿರುತ್ತದೆ. ಆದ್ದರಿಂದ ಸದರಿ ರಸ್ತೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜು. 18ರಿಂದ ಮುಂದಿನ ಆದೇಶದವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ. ತುರ್ತು ಪರಿಸ್ಥಿತಿ ವಾಹನಗಳಿಗೆ ವಿನಾಯತಿಯಿದೆ. ಮಂಗಳೂರಿನಿಂದ ಹಾಗೂ ಬೆಂಗಳೂರಿಗೆ ಮತ್ತು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುವ ವಾಹನಗಳು ಹಾಸನ-ಬೇಲೂರು-ಮೂಡಿಗೆರೆ ಚಾರ್ಮಾಡಿ ಘಾಟ್ ಮಾರ್ಗವನ್ನು ಬಳಸಬಹುದಾಗಿದೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗುಡ್ಡ ಕುಸಿತ | ಶಿರಾಡಿ ಘಾಟ್ ಅನಿರ್ದಿಷ್ಠಾವಧಿ ಬಂದ್; ಬದಲಿ ಮಾರ್ಗ ಬಳಕೆಗೆ ಸೂಚನೆ
RELATED ARTICLES