ಶಿರೂರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಗಾರ

0
49

ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ , ಸಮೃದ್ಧ ಬೈಂದೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು, ಲಯನ್ಸ್ ಕ್ಲಬ್ ಉಪ್ಪುಂದ , ಜೋಗಿ ಮನೆ ಟ್ರಸ್ಟ್ ಹಳೆಗೇರಿ , ಸರ್ಕಾರಿ ಪದವಿ ಪೂರ್ವ ಕಾಲೇಜ್ ಶಿರೂರು ಇವರುಗಳ ಸಹಯೋಗದೊಂದಿಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಗಾರ ” ಪ್ರೇರಣಾ 2025″ ಕಾರ್ಯಕ್ರಮ ಸರ್ಕಾರಿ ಪದವಿ ಪೂರ್ವ ಕಾಲೇಜ್ ಶಿರೂರಿನಲ್ಲಿ ಇತ್ತೀಚಿಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರತ್ನ ಆಚಾರ್ಯ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯಕ್ , ಬಿಜೆಪಿ ಮಂಡಲ ಅಧ್ಯಕ್ಷ ಅನಿತಾ ಎಂ.ಜೋಗಿ ಮನೆ ಟ್ರಸ್ಟ್ ನ ವಸಂತ ಜೋಗಿ, ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ ಅಧ್ಯಕ್ಷ ಅಬ್ದುಲ್ ಮುನಾಫ್, ಸೀನಿಯರ್ ಚೇಂಬರ್ನನ ರಾಷ್ಟ್ರೀಯ ನಿರ್ದೇಶಕೆ ಹುಸೇನ್ ಹೈಕಾಡಿ, ಎಸ್ ಡಿ ಎಂ ಸಿ ಅಧ್ಯಕ್ಷ ಮೊಹಮ್ಮದ್ ಗೌಸ್ , ನಮ್ಮ ನಾಡ ಒಕ್ಕೂಟದ ಬೈಂದೂರು ಅಧ್ಯಕ್ಷ ಸೈಯದ್ ಅಜ್ಮಲ್ ಉಪಸ್ಥಿರಿದ್ದರು.ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಲಯನ್ಸ್ ಸುಂದರ್ ಕೊಠಾರಿ, ಸಂಪನ್ಮೂಲ ವ್ಯಕ್ತಿ ಆಗಿ ಸರೋಜಾ ವಲಯ ತರಬೇತುದಾರರು ,ಹಾಗೂ ಅಕಾಡೆಮಿ ಆಫ್ ಪರ್ಸನಾಲಿಟಿ ಎಕ್ಸೆಲೆನ್ಸ್ ತರಬೇತುದಾರ ಕೆ.ಕೆ. ಶಿವರಾಮ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಶಾಲೆಯ ವಿದ್ಯಾರ್ಥಿಗಳು ಈ ಕಾರ್ಯಗಾರದಲ್ಲಿ ಭಾಗವ ಹಿಸಿದರು .ಉಪ ಪ್ರಾಂಶುಪಾಲೆ ಜಯಂತಿ ಶೆಟ್ಟಿ ಸ್ವಾಗತಿಸಿ ವಂದಿಸಿದರ ಕಾರ್ಯಕ್ರಮದ ನಿರ್ದೇಶಕರು ಸುಮಾ ಆಚಾರ್ ಪ್ರಾಸವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here