ಉಡುಪಿ: ಶೀರೂರು ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಮುಂಬಯಿ ಸಾಂತಾಕ್ರೂಜ್ ನಲ್ಲಿರುವ ಪೇಜಾವರ ಮಠದಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು.
ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಶೀರೂರು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿ, ಶೀರೂರು ಮಠದ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಕರ್ಮ ಭೂಮಿ ಮುಂಬಯಿಯಲ್ಲಿ ಬದುಕು ಕಟ್ಟಿಕೊಂಡಿರುವ ತುಳುನಾಡಿನ ಬಂಧುಗಳು ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ಸಭೆಯಲ್ಲಿ ಶ್ರೀಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ, ಸಂಚಾಲಕ ಕೆ. ವಿಷ್ಣುಮೂರ್ತಿ ಆಚಾರ್ಯ, ಕಾರ್ಯದರ್ಶಿ ಮೋಹನ್ ಭಟ್ ಉಪಸ್ಥಿತರಿದ್ದರು.

