ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಟ್ಟಿಂಗೇರಿ ನಿವಾಸಿ ಸುಂದರ ಪೂಜಾರಿ (60) ಎ. 7 ರಂದು ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಮಾಡಿಕೊಂಡಿದ್ದಾರೆ.
ಬಾಯಿಯಲ್ಲಿ ನೊರೆ ಬರುತ್ತಿರುವುದನ್ನು ಮನೆಯವರು ನೋಡಿ ಆಯಂಬುಲೆನ್ಸ್ ನಲ್ಲಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪುತ್ರ ಸುಕೇಶ್ ಪೂಜಾರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

