ಅಂಡಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೮ನೇ ತರಗತಿ ವಿದ್ಯಾರ್ಥಿ ಶಿವಾನಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

0
63


ಅಂಡಾರಿನ ಶಿವಾನಿ ರಾಜ್ಯಮಟ್ಟಕ್ಕೆ ಆಯ್ಕೆ.
ಹೆಬ್ರಿ : ಹೆಮ್ಮಾಡಿಯ ಜನತಾ ಪ್ರೌಢಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ೧೪ರ ವಯೋಮಾನದ ಕ್ರೀಡಾಕೂಟದ ಎತ್ತರ ಜಿಗಿತದಲ್ಲಿ ಅಂಡಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೮ನೇ ತರಗತಿ ವಿದ್ಯಾರ್ಥಿ ಶಿವಾನಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಶಿವಾನಿ ಅಂಡಾರು ಮಲ್ಲಡ್ಕದ ಬೇಬಿ ಮತ್ತು ಆನಂದ ಅವರ ಪುತ್ರಿ. ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಮತ್ತು ಮೆಲುಸ್ತುವಾರಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘ ವಿದಾರ್ಥಿ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here