ಲಂಡನ್: ಇತ್ತೀಚೆಗೆ ನಡೆದ ಬ್ರಿಟನ್ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ ಸಂಸದೆ ಶಿವಾನಿ ರಾಜಾ ಅವರು ಬ್ರಿಟನ್ ಸಂಸತ್ತಿನಲ್ಲಿ ಭಗವದ್ಗೀತೆಯ ಆಧಾರದ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ. ಶಿವಾನಿ ಅವರು ಲೀಸೆಸ್ಟರ್ ಈಸ್ಟ್ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಕಳೆದ 37 ವರ್ಷಗಳಲ್ಲಿ ಲೀಸೆಸ್ಟರ್ ಕ್ಷೇತ್ರದಿಂದ ಕನ್ಸರ್ವೇಟಿವ್ ಪಕ್ಷದಿಂದ ಆಯ್ಕೆಯಾದ ಮೊದಲ ಸಂಸದೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಲೀಸೆಸ್ಟರ್ ಈಸ್ಟ್ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಗುಜರಾತ್ ಮೂಲದ ಉದ್ಯಮಿ ಶಿವಾನಿ ತಿಳಿಸಿದ್ದಾರೆ.
ಬ್ರಿಟನ್ ಸಂಸತ್ತಿನಲ್ಲಿ ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಭಾರತ ಮೂಲದ ನೂತನ ಸಂಸದೆ ಶಿವಾನಿ ರಾಜಾ
RELATED ARTICLES