ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಆಚರಣೆ

0
12

ಅಜೆಕಾರು : ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಪ್ರಯುಕ್ತ ಪ್ರಾರ್ಥನೆ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಪಾರಾಯಣ, ಮಹಾಪೂಜೆ, ಅನ್ನಸಂತರ್ಪಣೆ ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ಗುಡ್ಡೆಅಂಗಡಿ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ, ಆಡಳಿತ ಮೊಕ್ತೇಸರ ಚಿರಂಜಿತು ಅಜಿಲ ಇವರ ಸಹಕಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಡಂದಲೆ ಶ್ರೀಶ ಭಟ್ ಮತ್ತು ಬಳಗದವರಿಂದ ಭಕ್ತಿ ಗಾನ ಕಾರ್ಯಕ್ರಮ ನಡೆಯಿತು. ‌ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಸದಸ್ಯರು, ಗ್ರಾಮಸ್ಥರು, ಭಕ್ತಾದಿಗಳು ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here