Monday, July 15, 2024
Homeರಾಷ್ಟ್ರೀಯಬೆಂಗಳೂರು | ಶೋಭಾ ಕರಂದ್ಲಾಜೆ, ಡಾ, ಮಂಜುನಾಥ್, ತೇಜಸ್ವಿ ಸೂರ್ಯ ಭರ್ಜರಿ ಮುನ್ನಡೆ

ಬೆಂಗಳೂರು | ಶೋಭಾ ಕರಂದ್ಲಾಜೆ, ಡಾ, ಮಂಜುನಾಥ್, ತೇಜಸ್ವಿ ಸೂರ್ಯ ಭರ್ಜರಿ ಮುನ್ನಡೆ

ಬೆಂಗಳೂರು: ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಮಂಜುನಾಥ್ 1,24,000 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ 1,47,000 ಮತಗಳ ಅಂತರ ಕಾದಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ 94,000 ಅಂತರದಿಂದ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಡಾ. ಮಂಜುನಾಥ್ ಬೆಂಗಳೂರು ಗ್ರಾಮಾಂತರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಬಿಟ್ಟು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

ಹೀಗಾಗಿ ಇಲ್ಲಿವರೆಗಿದ್ದ ಬಿಜೆಪಿ ನೇತೃತ್ವದ ಎನ್ ಡಿಎಗಿದ್ದ ನಿರೀಕ್ಷೆ ಕಡಿಮೆಯಾಗುತ್ತಿದೆ. ಕಳೆದ ಬಾರಿ ಬಿಜೆಪಿಯೊಂದೇ 303 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿ 240 ಸೀಟುಗಳಲ್ಲಿ ಮಾತ್ರ ಮುನ್ನಡೆ ಸಾದಿಸುತ್ತಿದ್ದಾರೆ.

ಕಳೆದ ಬಾರಿ 52 ಸೀಟು ಪಡೆದಿದ್ದ ಕಾಂಗ್ರೆಸ್ ಈ ಬಾರಿ 95 ಸೀಟುಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.

RELATED ARTICLES
- Advertisment -
Google search engine

Most Popular