ಉಡುಪಿಯಲ್ಲಿ ಬೆಚ್ಚಿಬೀಳಿಸುವ ಘಟನೆ ; ಮದುವೆ ಭರವಸೆ ನೀಡಿ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಆರೋಪ

0
199

ಉಡುಪಿ : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯಾಗಿಸಿರುವ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮೂವರು ಆರೋಪಿಗಳ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿ ಕೆಲಸ ಹುಡುಕಿಕೊಂಡು ಉಡುಪಿಗೆ ಬಂದಿದ್ದಳು. ಈ ವೇಳೆ ಆರೋಪಿಗಳಾದ ಅಸ್ಸಾಂ ಮೂಲದ ಕುಶಾಲ್, ರಾಜೇಶ್ ಹಾಗೂ ಕೌಶಲ್ ಅವರು ಬಾಲಕಿಗೆ ಮದುವೆಯಾಗುವುದಾಗಿ ನಂಬಿಕೆ ಮೂಡಿಸಿದ್ದರೆಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರಿನ ಪ್ರಕಾರ, ಕಳೆದ ಡಿಸೆಂಬರ್ ತಿಂಗಳಿನಿಂದ ಆರೋಪಿಗಳು ಒಬ್ಬರಾದ ಬಳಿಕ ಮತ್ತೊಬ್ಬರಂತೆ ಬಾಲಕಿಯ ಅಸಹಾಯಕ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಸದ್ಯ ಬಾಲಕಿ ಸುಮಾರು ಏಳು ತಿಂಗಳ ಗರ್ಭಿಣಿಯಾಗಿದ್ದು, ಆಪ್ತರ ಸಹಾಯದೊಂದಿಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾಳೆ.

ದೂರಿನ ಆಧಾರದ ಮೇಲೆ ಅಸ್ಸಾಂ ಮೂಲದ ಕುಶಾಲ್, ರಾಜೇಶ್ ಹಾಗೂ ಕೌಶಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here