Sunday, July 21, 2024
HomeUncategorizedನಟ ಸಲ್ಮಾನ್ ಖಾನ್ ಮನೆ ಬಳಿ ಗುಂಡಿನ ದಾಳಿ: ಪೊಲೀಸ್ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ

ನಟ ಸಲ್ಮಾನ್ ಖಾನ್ ಮನೆ ಬಳಿ ಗುಂಡಿನ ದಾಳಿ: ಪೊಲೀಸ್ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ

ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಶದಲ್ಲಿದ್ದ ಒಬ್ಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಏ. 14ರಂದು ನಟ ಸಲ್ಮಾನ್ ಖಾನ್ ನಿವಾಸದ ಬಳಿ ಗುಂಡಿನ ದಾಳಿ ನಡೆದಿತ್ತು. ಈ ಗುಂಡಿನ ದಾಳಿಗೆ ಗನ್ ಒದಗಿಸಿದ ಆರೋಪದಲ್ಲಿ ಅನುಜ್ ಥಾಪನ್ ಮತ್ತು ಸೋನು ಸುಭಾಷ್ ಚಂದರ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಪೊಲೀಸ್ ವಶದಲ್ಲಿದ್ದ ಅನುಜ್ ಥಾಪನ್ ಮೇ 1ರಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ಆತನನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದರಾದರೂ ಆತ ಅಷ್ಟರಲ್ಲಿ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಯಾವ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ. ಗುಂಡಿನ ದಾಳಿಗೆ ಸಂಬಂಧಿಸಿ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

RELATED ARTICLES
- Advertisment -
Google search engine

Most Popular