Tuesday, December 3, 2024
Homeಮುಲ್ಕಿತೋಕೂರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೇಮಸ್ ಯೂತ್ ಕ್ಲಬ್ ವತಿಯಿಂದ ಶ್ರಮದಾನ ಮತ್ತು ಸ್ವಚ್ಛತೆ

ತೋಕೂರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೇಮಸ್ ಯೂತ್ ಕ್ಲಬ್ ವತಿಯಿಂದ ಶ್ರಮದಾನ ಮತ್ತು ಸ್ವಚ್ಛತೆ

ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಇವರ ಸಹಯೋಗದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ಹಳೆಯಂಗಡಿ ಸದಸ್ಯರಿಂದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇದರ ವಾರ್ಷಿಕ ಷಷ್ಠಿ ಮಹೋತ್ಸವದ ಅಂಗವಾಗಿ ಶ್ರಮದಾನ ಮತ್ತು ಸ್ವಚ್ಛತಾ ಕಾರ್ಯಕ್ರಮವನ್ನು ಭಾನುವಾರ ಬೆಳಿಗ್ಗೆ ದೇವಸ್ಥಾನದ ವಠಾರದಲ್ಲಿ ನೆರವೇರಿಸಲಾಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರು ಮತ್ತು ಫೇಮಸ್ ಯೂತ್ ಕ್ಲಬ್ಬಿನ ಸದಸ್ಯರೂ ಆದ ಶ್ರೀ ಸಂಪತ್ ಜೆ ಶೆಟ್ಟಿ, ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರು, ಸದಸ್ಯರಾದ ಪ್ರಮೋದ್ ದೇವಾಡಿಗ, ಮೋಹನ್ ದಾಸ್ ದೇವಾಡಿಗ, ಸುರೇಶ್ ಬಿ ದೇವಾಡಿಗ, ಸುಧೀರ್ ಭಂಡಾರಿ, ಮಹಮ್ಮದ್ ಶರೀಫ್, ಮನೋಹರ ಆಚಾರ್ಯ, ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್, ಕಾರ್ಯದರ್ಶಿ ಕುಸುಮ ಎಚ್ ಕೋಟ್ಯಾನ್, ಕೋಶಾಧಿಕಾರಿ ಇಂದಿರಾ ಸಂಜೀವ ಕರ್ಕೇರ, ಸದಸ್ಯರಾದ ಅರ್ಚನಾ ರವರು  ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular