ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ ಹಾಗೂ ಮಾಸಿಕ ಸಭೆ

0
53

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಕಾವಳಪಡೂರು ಆಲಂಪುರಿಯಲ್ಲಿ ಗಿಡ ನಾಟಿ ಮಾಡಿದ ಗಿಡಗಳ ಮಧ್ಯ ಬಂದಿದ್ದ ಹುಲ್ಲು ಕಡ್ಡಿಗಳನ್ನು ತೆಗೆದು ಸ್ವಚ್ಛ ಗೊಳಿಸುವ ಶ್ರಮದಾನ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯನಂದ ಪಿ ಉಪಸ್ಥಿತರಿದ್ದು ಸೂಕ್ತ ಮಾಹಿತಿ ಮಾರ್ಗದರ್ಶನ ನೀಡಿದರು. ಶ್ರಮದಾನದ ನಂತರ ಸಮಿತಿಯ ಮಾಸಿಕ ಸಭೆ ನಡೆಸಿ ಮುಂದಿನ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು.

ಘಟಕ ಪ್ರತಿನಿಧಿ ಪ್ರವೀಣ್, ಸಂಯೋಜಕಿ ರೇಖಾ ಪಿ , ಸದಸ್ಯರುಗಳಾದ ಸಂಪತ್ ಶೆಟ್ಟಿ, ಮೋಹನಂದ , ಶಶಿಕಲಾ ವಿನೋದ್ ನಾರಾಯಣ್ ಶೆಟ್ಟಿ ,ಅಶೋಕ ಬೊಲ್ಮಾರ್ ,ಮಹಾಬಲ ರೈ ಲಕ್ಷ್ಮಣ್, ರೋಹಿತ್, ಜನಾರ್ದನ,ರಮೇಶ್ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here