ತುಂಬೆ ಸರ್ಕಾರಿ ಶಾಲಾ ವಠಾರದಲ್ಲಿ ಅ.25ರಂದು ಶ್ರಮದಾನ

0
12

ತುಂಬೆ : ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.), ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ, ತುಂಬೆ ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 25ರ ಭಾನುವಾರ ಬೆಳಿಗ್ಗೆ 8 ಗಂಟೆಗೆ ತುಂಬೆ ಸರ್ಕಾರಿ ಶಾಲಾ ವಠಾರದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಲಿದೆ.

ಸಾಮಾಜಿಕ ಕಳಕಳಿ ಹಾಗೂ ಸಾರ್ವಜನಿಕ ಸೇವೆಯ ಉದ್ದೇಶದಿಂದ ಆಯೋಜಿಸಲಾಗಿರುವ ಈ ಶ್ರಮದಾನದಲ್ಲಿ ಸಂಘಟನೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲ ಸದಸ್ಯರು ಸಮಯಕ್ಕೆ ಸರಿಯಾಗಿ ಆಗಮಿಸಿ ಶ್ರಮದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸಹಕರಿಸಬೇಕೆಂದು ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ, ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ, ತುಂಬೆ ಇವುಗಳ ವತಿಯಿಂದ ವಿನಂತಿಸಲಾಗಿದೆ.