ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಪ್ರಸನ್ನ ಗಣಪತಿಯ ಸನ್ನಿಧಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಅಷ್ಟೋತ್ತರ ಶತ ನಾಳಿಕೇರ ಗಣಯಾಗವು ಕ್ಷೇತ್ರದ ಧರ್ಮದರ್ಶಿ
ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ರಾಘವೇಂದ್ರ ಭಟ್ ನೇತೃತ್ವದಲ್ಲಿ ನೆರವೇರಿತು..
ಮಧ್ಯಾನ್ನ ಮೂಡು ಗಣಪತಿ ಸೇವೆ ಮಹಾ ಅನ್ನಸಂತರ್ಪಣೆ ಹಾಗೂ ಸಂಜೆ ರಂಗ ಪೂಜಾ ಸೇವೆಯು ಸಾಮೂಹಿಕವಾಗಿ ಭಕ್ತರ ಪರವಾಗಿ ಸಂಪನ್ನಗೊಂಡಿತು ಎಂದು ಕ್ಷೇತ್ರ ಉಸ್ತುವಾರಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ.