ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ.ರಾಮಕೃಷ್ಣ ಶಿರೂರು ರಾಜ್ಯಮಟ್ಟದ ಶ್ರೀ ಗುರು ಪುಟ್ಟರಾಜ ಗವಾಯಿ ಸದ್ಭಾವನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಡಾ.ವಿ.ಬಿ.ಹಿರೇಮಠ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಗದಗ್ ನಲ್ಲಿ ನಡೆದ ಡಾ. ಪುಟ್ಟರಾಜ ಗವಾಯಿ 111ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಸದ್ಭಾವನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಗದಗ ಜಿಲ್ಲೆಯ ಬೆಟಗೇರಿ ತಾಲೂಕಿನ ನರಸಾಪುರದ ಅನ್ನದಾನೇಶ್ವರ ಶಾಖಾ ಮಠದ ಡಾ.ವೀರೇಶ್ವರ ಶಿವಯೋಗಿಗಳು, ಡಾ.ಪಂಡಿತ್ ರಾಜಗುರು ಗುರುಸ್ವಾಮಿ ಕಲಕೇರಿ, ಡಾ. ಬಿ. ವಿ. ಮೆಮೋರಿಯಲ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ವಿ.ವಿ. ಹಿರೇಮಠ ಮತ್ತು ಹಿರಿಯ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಡಾ. ಬಿ.ವಿ. ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ವಿ.ವಿ.ಹಿರಿಮಠ ಅವರು ಪ್ರಸ್ತಾವಿಕ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು.