Monday, February 10, 2025
Homeದಾವಣಗೆರೆಸಾಲಿಗ್ರಾಮ ಗಣೇಶ್ ಶೆಣೈಯವರಿಗೆ “ಶ್ರೀ ಕೃಷ್ಣದೇವರಾಯ” ರಾಷ್ಟ್ರ ಪ್ರಶಸ್ತಿ

ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ “ಶ್ರೀ ಕೃಷ್ಣದೇವರಾಯ” ರಾಷ್ಟ್ರ ಪ್ರಶಸ್ತಿ

ದಾವಣಗೆರೆ-ಆಗಸ್ಟ್,

ರಾಯಚೂರಿನ ಬೆಳಕು ಸಾಂಸ್ಕೃತಿಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಆಶ್ರಯದಲ್ಲಿ ರಾಷ್ಟ್ರ ಮಟ್ಟದ ಬೆಳಕು ಸಂಭ್ರಮ ಕಾರ್ಯಕ್ರಮದಲ್ಲಿ ದಾವಣಗೆರೆಯ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತರಾದ ಸಾಲಿಗ್ರಾಮ ಗಣೇಶ್ ಶೆಣೈ ಯವರಿಗೆ ಶ್ರೀ ಕೃಷ್ಣದೇವರಾಯ” ರಾಷ್ಟ್ರ ಪ್ರಶಸ್ತಿಗೆ 1 ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ. ಯಕ್ಷಗಾನ ಸೇರಿದಂತೆ ದಾವಣಗೆರೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಆಧ್ಯಾತ್ಮ, ಸಾಮಾಜಿಕ ಕಾಳಜಿಯ ಚಟುವಟಿಕೆಗಳನ್ನು ಗುರುತಿಸಿ ಈ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾದ ಶೆಣೈಯವರಿಗೆ ಅವರ ಅಭಿಮಾನಿಗಳು ಕಲಾಕುಂಚ, ಯಕ್ಷರಂಗ, ಸಿನಿಮಾಸಿರಿ, ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಮುಂತಾದ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular