ಅಳಿಕೆ ವಲಯಮಟ್ಟದ ಭಜನೋತ್ಸವ ಸಮಿತಿ ಅಧ್ಯಕ್ಷರಾಗಿ ಮಾರಪ್ಪ ಶೆಟ್ಟಿ ಬೈಲುಗುತ್ತು ಆಯ್ಕೆ. ಅಳಿಕೆ ಭಜನೋತ್ಸವ ಕಾರ್ಯಕ್ರಮದ ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ ನಡೆಯಿತು.
ದಿನಾಂಕ 21/12/2025 ಆದಿತ್ಯವಾರ ರಂದು ನಡೆಯುವ ವಲಯಮಟ್ಟದ ಭಜನೋತ್ಸವ ಕಾರ್ಯಕ್ರಮದ ಪೂರ್ವತಯಾರಿ ಸಭೆಯನ್ನು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಸಲಾಯಿತು.ಸಭೆಯಲ್ಲಿ ಸಮಿತಿ ರಚನೆ ಮಾಡಿ ಸಮಿತಿಯ ಅಧ್ಯಕ್ಷರಾಗಿ ದೇವಸ್ಥಾನದ ಆಡಳಿತ ಅಧ್ಯಕ್ಷರಾದ ಮಾರಪ್ಪ ಶೆಟ್ಟಿ ಬೈಲುಗುತ್ತು ಇವರನ್ನು ನೇಮಕ ಮಾಡಲಾಯಿತು. ಈ ಸಭೆಯಲ್ಲಿ ತಾಲೂಕು ಯೋಜನಾಧಿಕಾರಿಯಾದ ಸುರೇಶ್ ಗೌಡ, ವಿವಿಧ ಭಜನಾ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಯವರು ತಾಲೂಕಿನ ಭಜನಾ ಪರಿಷತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಪಾಲ್ತಾಜೆ, ಕೋಶಾಧಿಕಾರಿಗಳಾದ ಜಯರಾಮ್ ರೈ ಕಲ್ಲಡ್ಕ, ವಲಯದ್ಯಕ್ಷರಾದ ರಾಜೇಂದ್ರ ರೈ,ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಯವರು,ವಲಯ ಮೇಲ್ವಿಚಾರಕರು,ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು, ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ಮೀನಾಕ್ಷಿ ಸ್ವಾಗತಿಸಿ ಸೇವಾಪ್ರತಿನಿಧಿ ಕಾವ್ಯರವರು ವಂದಿಸಿದರು.
Home Uncategorized ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿಟ್ಲ ತಾಲೂಕಿನ ಅಳಿಕೆ ವಲಯದ ಭಜನೋತ್ಸವ ಕಾರ್ಯಕ್ರಮದ ಪೂರ್ವ...

