Tuesday, January 14, 2025
HomeUncategorizedದುರ್ಬಲ ವರ್ಗದ ಜನರಿಗೆ ಹೊಸ ಬದುಕು ಕೊಟ್ಟದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ :...

ದುರ್ಬಲ ವರ್ಗದ ಜನರಿಗೆ ಹೊಸ ಬದುಕು ಕೊಟ್ಟದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪ್ರವೀಣ್ ಕುಮಾರ್

ವಿಟ್ಲ : ದುರ್ಬಲ ವರ್ಗದ ಜನರಿಗೆ ಹೊಸ ಬದುಕು ಕೊಟ್ಟದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮಗಳ ಅಡಿಯಲ್ಲಿ ಮಹಿಳೆಯರಿಗೆ ಆರೋಗ್ಯ, ನೈರ್ಮಲ್ಯ, ಶಿಕ್ಷಣ, ಪೌಷ್ಟಿಕ ಆಹಾರ ತಯಾರಿ, ಸ್ವಉದ್ಯೋಗ,, ಕೌಶಲ್ಯ ತರಬೇತಿ, ಮುಂತಾದ ವಿಶೇಷ ಕಾರ್ಯಕ್ರಮಗಳ ಮೂಲಕ ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ಯೋಜನೆಯ ಮೂಲಕ ನಡೆಯುತ್ತಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಹೇಳಿದರು.
ಅವರು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಿಟ್ಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯ ಕ್ರಮ ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವನ್ನುಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ವಿಟ್ಲ ವಲಯ ಅಧ್ಯಕ್ಷ ಕೃಷ್ಣಯ್ಯ ಬಲ್ಲಾಳ್ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿ ಬಂದು ಸ್ವಸಹಾಯ ಸಂಘಗ ವಿಟ್ಲ ವಲಯl ಅಧ್ಯಕ್ಷ ಪ್ರಮೀಳಾ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕರಾದ ಆಶಾ ಬೆಳ್ಳಾರೆ ಮಹಿಳಾ ಸಬಲೀಕರಣದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಪಾತ್ರ ಎಂಬುವುದರ ಬಗ್ಗೆ ವಿಚಾರ ವಿನಿಮಯ ಮಾಡಿದರು.

ವೇದಿಕೆಯಲ್ಲಿ ಸ್ವಸಾಯ ಸಂಘ ಗಳ ಕೇಂದ್ರ ಒಕ್ಕೂಟ ಅದ್ಯೇಕ್ಷರಾದ ನವೀನ್ ಚಂದ್ರ, ವಕೀಲ ನಟೇಶ್ ವಿಟ್ಲ,ಪ್ರಗತಿಬಂದು ಸ್ವಸಾಯ ಸಂಘ ಗಳ ವಿಟ್ಲ ಒಕ್ಕೂಟ ಅಧ್ಯಕ್ಷ ವಿಶ್ವನಾಥ್ ವಿ, ವಿಟ್ಲ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಚೇತನಾ ಮೊದಲದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ವಲಯ ಅಧ್ಯಕ್ಷರುಗಳು , ಒಕ್ಕೂಟ ಅಧ್ಯಕ್ಷರುಗಳು , ಮೇಲ್ವಿಚಾರಕರು,ಸೇವಾಪ್ರತಿನಿಧಿಗಳು, ಜ್ಞಾನವಿಕಾಸ ಸದಸ್ಯರು, ವಿಟ್ಲ ಶೌರ್ಯ ತಂಡದ ಸದಸ್ಯರು ಭಾಗವಹಿಸಿದ್ದರು.

ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ಪ್ರಸ್ತಾವಿಕದೊಂದಿಗೆ ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯಧಿಕಾರಿ ದೀಪಾ ಸಂಘಗಳ ವರದಿ ವಾಚಿಸಿ, ತಾಲೂಕು ಕೃಷಿ ಅಧಿಕಾರಿ ಚಿದಾನಂದ ವಂದಿಸಿದರು.ಜನಜಾಗ್ರತಿ ವೇದಿಕೆ ಸದಸ್ಯರಾದ ಜನಾರ್ಧನ್ ಪದ್ಮಶಾಲಿ ಕಾರ್ಯಕ್ರಮ ನೀರೂಪಿಸಿದರು.ಈ ಸಂದರ್ಭದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಹೂ ಗುಚ್ಚ, ರಂಗೋಲಿ, ಸಾಂಸ್ಕೃತಿಕ ಸ್ಪರ್ಧೆ ಗಳು ಜರಗಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

RELATED ARTICLES
- Advertisment -
Google search engine

Most Popular