Friday, February 14, 2025
Homeಉಡುಪಿಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ 65ನೇ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಪೂರ್ವಭಾವಿಯಾಗಿ ಭಜನಾ ಮಂದಿರದಲ್ಲಿ ಜ.28ರಂದು ಪ್ರಾರಂಭಗೊಂಡ ಭಜನಾ ಸಪ್ತಾಹಕ್ಕೆ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಂಘದ ಆಡಳಿತ ಸಮಿತಿ ಸದಸ್ಯರಾದ ಸುಧಾಕರ್ ಎ., ಭಾಸ್ಕರ ಅಂಚನ್, ವಿನಯ್ ಕುಮಾರ್, ಚೆನ್ನಕೇಶವ, ಜನಾರ್ದನ ಪೂಜಾರಿ, ಮಾಜಿ ಪ್ರ.ಕಾರ್ಯದರ್ಶಿ ಕುಶಲ್ ಕುಮಾರ್ ಎ., ಭಜನಾ ಸಹ ಸಂಚಾಲಕ ಶಂಕರ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿಯರಾದ ದೇವಕಿ ಕೆ. ಕೋಟ್ಯಾನ್, ಜಯಂತಿ ಹರೀಶ್, ಕಾರ್ಯದರ್ಶಿ ವಾಣಿಶ್ರೀ ಅರುಣ್ ಕುಮಾರ್, ಸಹ ಸಂಘಟನಾ ಕಾರ್ಯದರ್ಶಿ ಸಂಚಲ ಶಶಿಕಾಂತ್, ವಿಜಯಲಕ್ಷ್ಮಿ ಶಿವಕುಮಾರ್, ಪ್ರಮುಖರಾದ ಅಚ್ಯುತ ಎಮ್. ಪೂಜಾರಿ, ಸುಧಾಕರ ಪೂಜಾರಿ, ಪುನೀತ್ ಕುಮಾರ್, ರಾಜು ಕಡೆಕಾರ್, ಮೀನಾಕ್ಷಿ ಗೋಪಾಲ್ ಪೂಜಾರಿ, ಕಲ್ಯಾಣಿ ಆನಂದ ಕೋಟ್ಯಾನ್, ನಮನ್, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್ ಹಾಗೂ ಸಂಘದ ಆಡಳಿತ ಸಮಿತಿ, ಮಹಿಳಾ ಘಟಕ ಮತ್ತು ಶ್ರೀ ಗುರು ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳು, ಸಮಿತಿ ಸದಸ್ಯರು, ಸಂಘದ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular