ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿ ಇತಿಹಾಸ ಸೃಷ್ಟಿಸಿದ ಶುಭಾಂಶು ಶುಕ್ಲಾ

0
24

ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಮೂವರು ಸಿಬ್ಬಂದಿಯನ್ನು ಹೊತ್ತ ಆಕ್ಸಿಯಮ್ 4 ಮಿಷನ್‌ನ ಡ್ರ್ಯಾಗನ್ ಕ್ಯಾಪ್ಸುಲ್ ಇಂದು (ಗುರುವಾರ) ಸಂಜೆ 4.30ಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS)ದಲ್ಲಿ ಇಳಿದಿದೆ. ಶುಭಾಂಶು ಶುಕ್ಲಾ ಮತ್ತು ತಂಡವು ಬುಧವಾರ ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಫಾಲ್ಕನ್ 9 ರಾಕೆಟ್‌ನಿಂದ ನಡೆಸಲ್ಪಡುವ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹಾರಿತು. ಸೂಕ್ಷ್ಮ ಗುರುತ್ವಾಕರ್ಷಣೆಯಲ್ಲಿ ವೈಜ್ಞಾನಿಕ ಸಂಶೋಧನೆ ನಡೆಸಲು ಈ ಸಿಬ್ಬಂದಿ ISSನಲ್ಲಿ 14 ದಿನಗಳನ್ನು ಕಳೆಯಲಿದ್ದಾರೆ.

LEAVE A REPLY

Please enter your comment!
Please enter your name here