ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಯೊಂದನ್ನು ವಿಡಿಯೊವೊಂದರ ಮೂಲಕ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಡಾ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಮುಡಾ ದಾಖಲಾತಿಯಲ್ಲಿ ವೈಟ್ನರ್ ಹಚ್ಚಿ ಅಕ್ರಮ ಮರೆ ಮಾಚಿದ್ದಾರೆ ಎಂಬ ಬಿಜೆಪಿ-ಜೆಡಿಎಸ್ ನಾಯಕರ ಆರೋಪಗಳಿಗೆ ಸಿಎಂ ವೀಡಿಯೋ ಸಮೇತ ಸಾಕ್ಷಿ ನೀಡಿದ್ದಾರೆ. 33 ಸೆಕೆಂಡುಗಳ ವೀಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಇದಕ್ಕೆ ಸ್ಪಷ್ಟನೆಯನ್ನೂ ನೀಡಿದ್ದಾರೆ.
ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹೆಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ. ನನ್ನ ಪತ್ನಿ ಬದಲಿ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ ʻದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರʼ ಎಂಬ ನಾಲ್ಕೈದು ಪದಗಳಿಗೆ ವೈಟ್ನರ್ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ.
ವಿಡಿಯೋ ವೀಕ್ಷಿಸಲು ಲಿಂಕ್ ಕ್ಲಿಕ್ ಮಾಡಿ…