Sunday, July 14, 2024
Homeರಾಜ್ಯಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ?

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ?

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವೊಂದು ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದೆ. ಈ ನಡುವೆ ಮುಜುಗರದಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರರ ರಾಜೀನಾಮೆಗೆ ಸೂಚಿಸಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಹಿರಿಯ ಅಧಿಕಾರಿಗಳ ವಿರುದ್ಧ ಆರೋಪಿಸಿ, ಭ್ರಷ್ಟಾಚಾರ ಹಗರಣವೊಂದರ ಬಗ್ಗೆ ಮಾಹಿತಿ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ಇದೀಗ ಸಿಎಂ ಸಿದ್ದರಾಮಯ್ಯ ಸರಕಾರಕ್ಕೆ ಮುಜುಗರವನ್ನುಂಟು ಮಾಡಿದೆ. ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡುವಂತೆ ಪ್ರತಿಪಕ್ಷ ಬಿಜೆಪಿ ಪಟ್ಟು ಹಿಡಿದಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಗುರುವಾರ ಈ ಬಗ್ಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ನಾಗೇಂದ್ರ ರಾಜೀನಾಮೆ ನೀಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರ ಸಾವಿನ ಪ್ರಕರಣದಲ್ಲಿ ಆಗಿನ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿರುವ ನಾವು, ಅಂಥದ್ದೇ ಪ್ರಕರಣ ನಡೆದಿರುವಾಗ ಕ್ರಮ ಕೈಗೊಳ್ಳದಿದ್ದರೆ ಸರ್ಕಾರಕ್ಕೆ ಮುಖಭಂಗವಾಗುವ ಸಾಧ್ಯತೆ ಹೆಚ್ಚು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರಿಗೆ ರಾಜೀನಾಮೆಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular