ಬಂಟ್ವಾಳ: ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಿದ್ಧಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬೆಂಕಿ ಅವಘಡ ನಿಯಂತ್ರಣ ಬಗ್ಗೆ ಪ್ರಾತ್ಯಕ್ಷಿಕೆ ಬುಧವಾರ ನಡೆಯಿತು. ಈ ಪ್ರಾತ್ಯಕ್ಷಿಕೆಯಲ್ಲಿ ಪ್ರೌಢಶಾಲೆ ಮತ್ತು ಪಿಯೂಸಿ ವಿದ್ಯಾರ್ಥಿಗಳು ಪಾಲ್ಗೊಂಡರು. ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಬದುಕುವ ಕಲೆ ತಿಳಿಸುವ ಅಗತ್ಯವಿದೆ’ ಎಂದರು. ಬಂಟ್ವಾಳ ಅಗ್ನಿಶಾಮಕ ದಳದ ಠಾಣಾಧಿಕಾರಿ ರಾಜೇಶ್ ಮತ್ತು ಸಿಬ್ಬಂದಿಗಳು ಪ್ರಾತ್ಯಕ್ಷಿಕೆ ನೀಡಿದರು. ರೋಟರಿ ಕ್ಲಬ್ ಸದಸ್ಯರಾದ ರಾಘವೇಂದ್ರ ಭಟ್, ಹರಿಪ್ರಸಾದ್ ಶೆಟ್ಟಿ, ಸಂತೋಷ್ ಕುಮಾರ್ ಮತ್ತಿತರರು ಇದ್ದರು. ಶಿಕ್ಷಕ ಮಹೇಶ್ ಕುಮಾರ್ ಸ್ವಾಗತಿಸಿ, ವಂದಿಸಿದರು.