Monday, March 17, 2025
HomeUncategorizedಸಿದ್ಧಕಟ್ಟೆ: ನ.23 ರಂದು ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳಕ್ಕೆ ಭರದ ಸಿದ್ಧತೆ

ಸಿದ್ಧಕಟ್ಟೆ: ನ.23 ರಂದು ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳಕ್ಕೆ ಭರದ ಸಿದ್ಧತೆ

ಬಂಟ್ವಾಳ: ಇಲ್ಲಿನ ಎಲಿಯ ನಡುಗೋಡು ಗ್ರಾಮ ಸಿದ್ಧಕಟ್ಟೆ ಸಮೀಪದ ಕೊಡಂಗೆ ಎಂಬಲ್ಲಿ ಕಳೆದ ವರ್ಷ ನೂತನವಾಗಿ ನಿಮರ್ಾಣಗೊಂಡ ಸುಸಜ್ಜಿತವಾದ ವೀರ-ವಿಕ್ರಮ ಜೋಡುಕರೆಯಲ್ಲಿ ಇದೇ 23 ರಂದು ಶನಿವಾರ 2 ನೇ ವರ್ಷದ ‘ವೀರ- ವಿಕ್ರಮ ಜೋಡು ಕರೆ ಬಯಲು ಕಂಬಳ’ ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಪೊಡುಂಬ ಸಂದೀಪ್ ಶೆಟ್ಟಿ ಹೇಳಿದ್ದಾರೆ. ಬಿ.ಸಿ.ರೋಡಿನಲ್ಲಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,’ ಬಂಟ್ವಾಳ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ಇವರ ಗೌರವಾಧ್ಯಕ್ಷತೆಯಲ್ಲಿ ನಡೆಯುವ ಈ ಕಂಬಳಕ್ಕೆ ಅಂದು ಬೆಳಿಗ್ಗೆ ಗಂಟೆ 7.30ಕ್ಕೆ ಪೂಂಜ ಕ್ಷೇತ್ರದ ಅಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯರ ಅಧ್ಯಕ್ಷತೆಯಲ್ಲಿ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಚಾಲನೆ ನೀಡುವರು’ ಎಂದರು. ಕುಡುಂಬೂರುಗುತ್ತು ಕ್ಷೇತ್ರದ ಮೊಕ್ತೇಸರ ಗುತ್ತಿನಾರ್ ಜಯರಾಮ ಶೆಟ್ಟಿ, ಶಿವಮೊಗ್ಗ ಕಂಬಳ ಸಮಿತಿ ಪ್ರಧಾನ ಕಾರ್ಯದಶರ್ಿ ಎಲಿಯಾಸ್ ಸ್ಯಾಂಕ್ಟಿಸ್, ಸಿದ್ಧಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ, ಸಿದ್ಧಕಟ್ಟೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು, ಹಿರಿಯ ವೈದ್ಯರಾದ ಡಾ.ಪ್ರಭಾಚಂದ್ರ ಜೈನ್, ಡಾ.ಸುದೀಪ್ ಕುಮಾರ್ ಜೈನ್, ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್ ಮತ್ತಿತರ ಗಣ್ಯರು ಭಾಗವಹಿಸುವರು. ಅಂದು ಸಂಜೆ 7 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದು, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸುವರು. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ.ರಾಘವೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಆರ್ ಎಸ್ ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ, ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ, ಎಸ್ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಸಹಿತ ಅವಿಭಜಿತ ಜಿಲ್ಲೆಯ ಎಲ್ಲಾ ಶಾಸಕರು ಮತ್ತಿತರ ಗಣ್ಯರು ಭಾಗವಹಿಸುವರು ಎಂದು ತಿಳಿಸಿದರು. ಒಂದೇ ವರ್ಷದಲ್ಲಿ ಮೂರು ಕಂಬಳ: ಇಲ್ಲಿನ ವೀರ-ವಿಕ್ರಮ ಜೋಡುಕರೆಯಲ್ಲಿ ಇದೇ ಪ್ರಥಮ ಬಾರಿಗೆ ಒಂದು ವರ್ಷದೊಳಗೆ 3 ನೇ ಕಂಬಳ ನಡೆಯುತ್ತಿದೆ. ಕಳೆದ ಮಾ.16 ರಂದು ಪ್ರಥಮ ಕಂಬಳ ಮತ್ತು ಅ.19ರಂದು ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ವತಿಯಿಂದ ಸಬ್ ಜ್ಯೂನಿಯರ್ ವಿಭಾಗದಲ್ಲಿ ಎರಡನೇ ಕಂಬಳ ಕೂಟ ನಡೆದಿದ್ದು, ಇದೀಗ ನ.23 ರಂದು ಮತ್ತೆ 2ನೇ ವರ್ಷದ ಮೂರನೇ ಕಂಬಳ ನಡೆಯುತ್ತಿದೆ. ಪ್ರಥಮ ವರ್ಷದ ಕಂಬಳದಲ್ಲಿ ಒಟ್ಟು 99 ಜೋಡಿ, ರೋಟರಿ ಕ್ಲಬ್ ಕಂಬಳದಲ್ಲಿ ಸಬ್ ಜ್ಯೂನಿಯರ್ ವಿಭಾಗದ ಒಟ್ಟು 85 ಜೋಡಿ ಕೋಣಗಳು ಭಾಗವಹಿಸಿದ್ದು, ಈ ಬಾರಿ 200 ಕ್ಕೂ ಮಿಕ್ಕಿ ಜೋಡಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ವರ್ಷವಿಡೀ ಕುದಿ ಕಂಬಳ ನಡೆಯುತ್ತಿದ್ದು, ಈ ಬಾರಿ ವಾಹನ ನಿಲುಗಡೆಗೆ ಪ್ರತ್ಯೇಕ 4 ಎಕರೆ ಜಮೀನು ಮತ್ತು ಕೋಣಗಳ ವಿಶ್ರಾಂತಿಗೆ ಮೂರೂವರೆ ಎಕರೆ ಜಮೀನು ಸಮತಟ್ಟುಗೊಳಿಸಲಾಗಿದೆ. ಮಳೆಗಾಲದಲ್ಲಿ ಗುಡ್ಡದ ನೀರು ಕಂಬಳ ಕರೆಗೆ ಹರಿದು ಬಾರದಂತೆ ತಡೆಯಲು ಸುತ್ತಲೂ ಸುಮಾರು 30 ಸಿಮೆಂಟ್ ಪೈಪ್ ಅಳವಡಿಸಲಾಗಿದ್ದು, ಬೇಸಿಗೆಯಲ್ಲಿ ಕೂಡಾ ಕಂಬಳ ಕರೆಗೆ ನಿರಂತರ ನೀರಿನ ಸಂಪರ್ಕ ಅಳವಡಿಸಲಾಗಿದೆ. ಕಂಬಳ ಕರೆ ಸುತ್ತಲೂ ಇರುವ ಪ್ರಕೃತಿದತ್ತ ಮರ ಗಿಡಗಳ ನೆರಳು ಓಟದ ಕೋಣಗಳಿಗೆ ಅನುಕೂಲಕರವಾಗಿದೆ. ಚಿತ್ರನಟರ ದಂಡು: ಈ ಬಾರಿ ಸಂಗೀತ ನಿದರ್ೇಶಕ ಗುರುಕಿರಣ್ ಸಹಿತ ಚಿತ್ರನಟರಾದ ಜಗ್ಗೇಶ್, ವಿಜಯ ರಾಘವೇಂದ್ರ, ರಾಜ್ ಬಿ.ಶೆಟ್ಟಿ, ಭೋಜರಾಜ ವಾಮಂಜೂರು, ನಿರೀಕ್ಷಾ ಶೆಟ್ಟಿ ಮತ್ತಿತರ ನಟ ನಟಿಯರು ಭಾಗವಹಿಸುವರು ಎಂದು ಅವರು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಪ್ರಧಾನ ಕಾರ್ಯದಶರ್ಿ ಶಶಿಧರ ಶೆಟ್ಟಿ ಕಲ್ಲಾಪು, ಕೋಶಾಧಿಕಾರಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಗೌರವ ಸಲಹೆಗಾರ ರಾದ ವಸಂತ ಶೆಟ್ಟಿ ಕೇದಗೆ, ಸುರೇಶ ಶೆಟ್ಟಿ ಸಿದ್ಧಕಟ್ಟೆ, ಕಿರಣ್ ಕುಮಾರ್ ಮಂಜಿಲ, ಸಂಘಟನಾ ಕಾರ್ಯದಶರ್ಿ ಹರಿಪ್ರಸಾದ್ ಶೆಟ್ಟಿ ಕುರುಡಾಡಿ ಇದ್ದರು.

RELATED ARTICLES
- Advertisment -
Google search engine

Most Popular