ಸಿದ್ಧಕಟ್ಟೆ : ಆ.23 ಯಕ್ಷಗಾನ ತಾಳಮದ್ದಳೆ

0
5

ಬಂಟ್ವಾಳ : ಇಲ್ಲಿನ ಸಿದ್ಧಕಟ್ಟೆ ಸಮೀಪದ ಪೂಂಜ ಯಕ್ಷ ಮಿತ್ರರು ಸಂಘಟನೆ ವತಿಯಿಂದ ಆ.23ರಂದು ಮಧ್ಯಾಹ್ನ 2 ಗಂಟೆಗೆ ಸಿದ್ಧಕಟ್ಟೆ ಫಲ್ಗುಣಿ ಸಭಾಂಗಣದಲ್ಲಿ ಜಿಲ್ಲೆಯ ಆಯ್ದ ಕಲಾವಿದರಿಂದ ‘ಯಕ್ಷಗಾನ ತಾಳಮದ್ದಳೆ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಪೂಂಜ ಪಂಚದುರ್ಗಾ ಪರಮೇಶ್ವರಿ ಕ್ಷೇತ್ರದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ, ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ, ಸಿದ್ಧಕಟ್ಟೆ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಗದೀಶ್ ಕೊಯಿಲ, ಯಕ್ಷಗಾನ ಸಂಘಟಕ ಜನಾರ್ದನ ಅಮ್ಮುಂಜೆ, ಪ್ರಮುಖರಾದ ಪ್ರದೀಪ್ ಭಟ್ ಮಾದೇರಿ, ದುರ್ಗಾದಾಸ್ ಶೆಟ್ಟಿ ಕರೆಂಕಿಜೆ, ಬೇಬಿ ಶೆಟ್ಟಿ ಕಲಾಯಿದಡ್ಡ ಮತ್ತಿತರ ಗಣ್ಯರು ಭಾಗವಹಿಸಲಿದ್ದು, ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಸಂಘಟಕ ಹರಿಪ್ರಸಾದ್ ಶೆಟ್ಟಿ ಕುರುಡಾಡಿ ತಿಳಿಸಿದ್ದಾರೆ.