ನವದೆಹಲಿ: ಕೋವಿಡ್ ವೇಳೆ ವ್ಯಾಪಕವಾಗಿ ನೀಡಲಾಗಿದ್ದ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟಾಗಬಹುದು ಎಂದು ಆಸ್ಟ್ರಾಜೆನಿಕಾ ಒಪ್ಪಿಕೊಂಡಿದೆ. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ಈ ಲಸಿಕೆಯನ್ನು ನೀಡಲಾಗಿದೆ.
ಕೋವಿಶೀಲ್ಡ್ ಲಸಿಕೆ ಬಳಕೆಯಿಂದ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್ ಲೆಟ್ ಕಡಿಮೆಗೆ ಕಾರಣವಾಗುವ ಸ್ಥಿತಿಯನ್ನು ಉಂಟು ಮಾಡಬಹುದು ಎಂದು ಲಸಿಕೆ ತಯಾರಕರು ನ್ಯಾಯಾಲಯದ ದಾಖಲೆಗಳಲ್ಲಿ ಹೇಳಿದ್ದಾರೆ.
ಫಾರ್ಮಾ ಸಂಸ್ಥೆ ಆಸ್ಟ್ರಾಜೆನಿಕಾ ಮತ್ತು ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಿಂದ ಅಭಿವೃದ್ಧಿ ಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿತ್ತು. ಇಡೀ ಜಗತ್ತನ್ನೇ ಕಾಡಿದ ಕೋವಿಡ್ ಸಾಂಕ್ರಾಮಿಕ ತಡೆಗೆ ದೇಶದಲ್ಲಿ ವ್ಯಾಪಕವಾಗಿ ಕೋವಿಶೀಲ್ಡ್ ಲಸಿಕೆ ಬಳಸಲಾಗಿತ್ತು.
ಇಂಗ್ಲೆಂಡ್ ನಲ್ಲಿ ಲಸಿಕೆಯು ಹಲವು ಪ್ರಕರಣಗಳಲ್ಲಿ ಸಾವು ಮತ್ತು ತೀವ್ರತರವಾದ ಗಾಯಗಳಿಗೆ ಕಾರಣವಾದ ಆರೋಪದ ಮೇಲೆ ಆಸ್ಟ್ರಾಜೆನಿಕಾ ಮೊಕದ್ದಮೆ ಎದುರಿಸುತ್ತಿದೆ. ಯುಕೆ ಹೈಕೋರ್ಟ್ ನಲ್ಲಿ 100 ಮಿಲಿಯನ್ ಪೌಂಡ್ ಗಳವರೆಗೆ ಪರಿಹಾರಕ್ಕಾಗಿ 51 ಪ್ರಕರಣಗಳಲ್ಲಿ ವಿಚಾರಣೆ ನಡೆಯುತ್ತಿದೆ.