ನಿರ್ಲಕ್ಷತೆ ಅಜಾರೂಕತೆಗಳೇ ಹೆಚ್ಚಿನ ಅಪಘಾತಗಳಿಗೆ ಕಾರಣವಾಗಿದ್ದು ರಸ್ತೆ ನಿಯಮಗಳನ್ನು ಪಾಲಿಸದೆ ಮೋಜು ಮಸ್ತಿಗಾಗಿ ವಾಹನಗಳನ್ನು ಚಲಾಯಿಸುವುದರಿಂದ ರಸ್ತೆ ಅಪಘಾತಗಳಲ್ಲಿ ಮರಣ ಹೊಂದುವವರಲ್ಲಿ ಯುವಕರ ಸಂಖ್ಯೆಯೇ ಹೆಚ್ಚು ಎಂದು ಉಡುಪಿ ಜಿಲ್ಲಾ ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಹುಸೇನ್ ಹೇಳಿದರು. ಅವರು ಶುಕ್ರವಾರ ಸೈಲಸ್ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯ ಮಾಹಿತಿ ಕಾರ್ಯಕ್ರಮ ದಲ್ಲಿ ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ರಸ್ತೆ ನಿಯಮಗಳನ್ನು ಪಾಲಿಸುವಂತೆ ಆಗ್ರಹಿಸಿದರು. ರಸ್ತೆ ಅಪಘಾತಗಳಂತೆಯೇ, ಬೇಜಾವಾರಿ ವರ್ತನೆಯಿಂದ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು ಅವುಗಳ ನಿಯಂತ್ರಣವು ತೀರಾ ಅತ್ಯಗತ್ಯ ಎಂದು ಸಂಸ್ಥೆಯ ಪ್ರಿನ್ಸಿಪಾಲ್ ಡಾ. ಜಾರ್ಜ್ ಈ ಸಂದರ್ಭದಲ್ಲಿ ನುಡಿದರು .
ಪೋಲೀಸ್ ಇಲಾಖೆಯ ಪ್ರಕಾಶ್ ಹಾಗೂ ಇತರ ಸಿಬ್ಬಂದಿಗಳು ಭಾಗವಹಿಸಿದರು.
ಕಾಲೇಜಿನ ಉಪನ್ಯಾಸಕ ಉಪನ್ಯಾಸಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.