ಸೈಲಸ್ ಪದವಿ ಪೂರ್ವ ಕಾಲೇಜು ಶಿಕ್ಷಕರ ದಿನಾಚರಣೆ

0
114

ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಉತ್ತಮ ಸೌಹಾರ್ದ ಸಂಬಂಧವನ್ನು ಬೆಳೆಸಿಕೊಳ್ಳಬೇಕು ಇದು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ನಾಂದಿ ಯಾಗುತ್ತದೆ ಎಂದು ಸೈಲಸ್ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಡಾ. ಜಾರ್ಜ್ ಹೇಳಿದರು.
ದೇಶ ಕಂಡ ಅತಿ ಶ್ರೇಷ್ಠ ಶಿಕ್ಷಕ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಸ್ಮರಣಾರ್ಥ , ಕಾಲೇಜಿನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉಪನ್ಯಾಸಕರಾದ ನವೀನ್ ,ಗೀತಾ ,ದೇವಿ ರಮ್ಯಾ, ಪ್ರಭಾ ಹಾಗೂ ರಂಜಾನ್ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳಾದ ವೈಷ್ಣವಿ ಪೂಜಾರಿ ವೈಷ್ಣವಿ, ತಸ್ನೀಮ್, ಮುಶ್ರಿನಾ ಹಾಗೂ ಮಾಹಿರ್ ಗುರುವಂದನೆ ಸಲ್ಲಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆಡಳಿತ ಮಂಡಳಿ ವತಿಯಿಂದ ಶಿಕ್ಷಕರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಶಿಕ್ಷಕ ರಿಗಾಗಿ ವಿವಿಧ ಸ್ಪರ್ಧೆಗಳನ್ನು ವಿದ್ಯಾರ್ಥಿಗಳು ಏರ್ಪಡಿಸಿದರು. ಜಾಯ್ಲಿನ್ ಹಾಗು ತಂಡದವರು ಪ್ರಾರ್ಥಿಸಿದರು. ಸಿಮನ್ ಹಾಗೂ ಉಜ್ಮಾ ಕಾರ್ಯಕ್ರಮ ನಿರೂಪಿಸಿದರು. ಶೈನಾ
 ವಂದಿಸಿದರು

LEAVE A REPLY

Please enter your comment!
Please enter your name here