ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯನ್ನು ಸೈಲಸ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಪ್ರಿನ್ಸಿಪಲ್ ಡಾ. ಜಾರ್ಜ್, ಅಂಬೇಡ್ಕರ್ ಅವರು ಪ್ರತಿಪಾದಿಸಿದ ಸಮಾನತೆಯ ಸಂದೇಶ ಸಾರಿದರು.
ವಿದ್ಯಾರ್ಥಿಗಳಾದ ಸ್ವರ್ಣ ಮತ್ತು ಮನು ಬಸವರಾಜ್ ಅಂಬೇಡ್ಕರ್ ಜಯಂತಿಯ ಮಹತ್ವದ ಬಗ್ಗೆ ಮಾತನಾಡಿದರು. ಶಿಕ್ಷಕ ಹಾಗೂ ಶಿಕ್ಷಕೇತರವೃಂದದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಲಾಯಿತು.