ಹಾವೇರಿ: ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಅಕ್ಕ ತಂಗಿ (sisters) ಪುಣೆಯಲ್ಲಿ ಪತ್ತೆ ಆಗಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಹಾವೇರಿಯ ಅಬ್ದುಲ್ ಖಾದರ್ ಲೋಹಾರ್ ಪುತ್ರಿಯರಾದ ಉಮರ್ ಖೈರ್ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆಯಾಗಿದ್ದ ಅಕ್ಕ-ತಂಗಿ. ಹಾವೇರಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.
ಹಾವೇರಿಯ ಲಯನ್ಸ್ ಆಂಗ್ಲ ಶಾಲೆಯಲ್ಲಿ ಓದುತ್ತಿದ್ದ ಸಹೋದರಿಯರು, ಶನಿವಾರ ಶಾಲೆ ಮುಗಿಯುತ್ತಿದ್ದಂತೆ ಕಾಣೆಯಾಗಿದ್ದರು. ಎಷ್ಟೇ ಹುಡಕಾಟ ನಡೆಸಿದರೂ ಸಿಗದ ಕಾರಣ ಆತಂಕಗೊಂಡ ಪೋಷಕರು ನಿನ್ನೆ ಹಾವೇರಿ ಮಹಿಳಾ ಠಾಣೆಯಲ್ಲಿ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು ಮಹಾರಾಷ್ಟ್ರದ ಪುಣೆಯಲ್ಲಿ ಅಕ್ಕ-ತಂಗಿ ಪತ್ತೆಯಾಗಿದ್ದಾರೆ.