ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡಿಕೊಂಡಿದ್ದರೆನ್ನಲಾದ ಸಂಸದ ಪ್ರಜ್ವಲ್ ರೇವಣ್ಣ ಎಸ್ ಐಟಿ ತನಿಖೆಗೆ ಹಾಜರಾಗಲು ಕಾಲಾವಕಾಶ ಕೋರಿದ್ದಾರೆ. ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಜಿ. ಎಸ್ ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅಧಿಕಾರಿಗಳು ನೀಡಿರುವ ನೋಟಿಸ್ ಗೆ ಉತ್ತರ ನೀಡಿರುವ ವಕೀಲ ಅರುಣ್, ನನ್ನ ಕಕ್ಷಿದಾರ ಪ್ರಜ್ವಲ್ ರೇವಣ್ಣ ಸದ್ಯ ಪ್ರವಾಸದಲ್ಲಿದ್ದಾರೆ. ಏಳು ದಿನ ಕಾಲಾವಕಾಶ ನೀಡಿ. ನಂತರ ಮತ್ತೊಂದು ದಿನಾಂಕ ನೀಡಿ. ಅಂದು ಅವರು ವಿಚಾರಣೆಗೆ ಹಾಜರಾಗುತ್ತಾರೆ ಎಂದು ತಿಳಿಸಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ ಅವುಗಳನ್ನು ಚಿತ್ರಿಕರಿಸಿ ಪೆನ್ ಡ್ರೈವ್ ನಲ್ಲಿ ಇಟ್ಟುಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಈ ನಡುವೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ.