ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಇಂದು ಮಹತ್ವದ ಬೆಳವಣಿಗೆಯಾಗಿದೆ. ದೂರುದಾರ ಚಿನ್ನಯ್ಯ ಅಲಿಯಾಸ್ ಮಾಸ್ಕ್ ಮ್ಯಾನ್ ವಿಚಾರಣೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಆರೋಪಿ ಚಿನ್ನಯ ಜೊತೆ ಎಸ್ಐಟಿ ಅಧಿಕಾರಿಗಳು ಉಜಿರೆ ಬಳಿ ಇರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಂಟ್ರಿಕೊಟ್ಟಿದ್ದಾರೆ. ಸರ್ಚ್ ವಾರಂಟ್ ಪಡೆದ ಎಸ್ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಮನೆ ಪರಿಶೋಧನೆ, ಸ್ಥಳ ಮಹಜರು ನಡೆಸಲು ದಿಢೀರ್ ಎಂಟ್ರಿಕೊಟ್ಟಿದ್ದಾರೆ.