ಹೆಬ್ರಿ : ಹೆಬ್ರಿಯ ಸೀತಾನದಿ ಮೇಲ್ ಬಂಡಿಮಠ ಎಂಬಲ್ಲಿ ಸರ್ಕಾರಿ ಬಸ್ ನಿಲುಗಡೆಗೊಳಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇಲ್ಲಿಂದ ವಿದ್ಯಾರ್ಥಿಗಳು, ಕಾರ್ಮಿಕರು ನಿತ್ಯವೂ ಹೋಗುತ್ತಾರೆ. ಈ ಪ್ರದೇಶದಲ್ಲಿ ಖಾಸಗಿ ಸರ್ವಿಸ್ ಬಸ್‌ಗಳು ಇಲ್ಲದೆ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಜನಪ್ರತಿನಿಧಿಗಳು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಈಗಾಗಲೇ ಮನವಿ ಮಾಡಲಾಗಿದೆ. ಇನ್ನೂ ಬಸ್ ನಿಲುಗಡೆ ಆರಂಭಿಸಿಲ್ಲ, ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ಸ್ಥಳೀಯರಾದ ವಿಜಯ ಶೆಟ್ಟಿ ಮನವಿ ಮಾಡಿದ್ದಾರೆ.