ಉಜಿರೆ: ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ಶಿವಾನಂದ ಪ್ರಭು (56) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ರಾತ್ರಿ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ ಮತ್ತು ಮಗ ಇದ್ದಾರೆ.
ಮಂಗಳೂರಿನಲ್ಲಿ ಲಾಲ್‌ಭಾಗ್‌ನಲ್ಲಿರುವ ಎಸ್.ಡಿ.ಎಂ. ಕಣ್ಣಿನ ಆಸ್ಪತ್ರೆಯಲ್ಲಿ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದು, ಪ್ರಾಮಾಣಿಕ ಹಾಗೂ ಸೌಜನ್ಯಪೂರ್ಣ ಸೇವೆಯಿಂದ ಅವರು ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾಗಿದ್ದರು. ನಿಡಿಗಲ್ ಶ್ರೀ ಮಹಾಗಣಪತಿ ದೇವಸ್ಥಾನದ ಸೇವಾಕಾರ್ಯಗಳಲ್ಲಿ ಅವರು ಸಕ್ರಿಯವಾಗಿ ಭಾಗವಹಿಸುತ್ತಿದ್ದರು.
ಇಂದು ಸೋಮವಾರ ಉಜಿರೆಯಲ್ಲಿ ಸಾರ್ವಜನಿಕ ರುದ್ರಭೂಮಿಯಲ್ಲಿ ಅವರ ಅಂತ್ಯಸಂಸ್ಕಾರ ನಡೆಸಲಾಯಿತು.